ಮೈಸೂರಿನ ಸರಗೂರಿನಲ್ಲಿ ಹುಲಿ ದಾಳಿ : ವ್ಯಕ್ತಿಗೆ ಗಂಭೀರ ಗಾಯ

Tiger attack in Saragur, Man seriously injured
Published on

ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಬಡಗಲಪುರ ಗ್ರಾಮದಲ್ಲಿ ರೈತರೊಬ್ಬರ ಮೇಲೆ ಗುರುವಾರ ಹುಲಿ ದಾಳಿ ನಡೆಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಬಡಗಲಪುರ ಗ್ರಾಮದ ರೈತ ಮಹದೇವ ಅವರ ಮೇಲೆ ಹುಲಿ ದಾಳಿ ನಡೆಸಿದ್ದು, ಅವರ ಮುಖದ ಮೇಲೆ ದಾಳಿ ನಡೆದಿದ್ದು, ಮುಖದ ಹಲವು ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ಸಂದರ್ಭ ಏಕಾಏಕಿ ಹುಲಿ ದಾಳಿ ನಡೆಸಿದೆ. ಗ್ರಾಮದಲ್ಲಿ ಎರಡು ತಿಂಗಳಿಂದ ನಿರಂತರವಾಗಿ ಹುಲಿ ಕಾಣಿಸಿಕೊಂಡು ಹಲವು ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಾಕಾನೆಗಳೊಂದಿಗೆ ಕೊಂಬಿಂಗ್ ಕಾರ್ಯಾಚರಣೆ ಕೈಗೊಂಡಿತ್ತು. ಹುಲಿ ಕಾರ್ಯಾಚರಣೆ ನಡೆಯುತ್ತಿದ್ದ ಅನತಿ ದೂರದಲ್ಲಿ ದೂರದಲ್ಲೇ ಹುಲಿ ದಾಳಿ ನಡೆದಿದೆ. ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳ ವಾಹನಕ್ಕೆ ಕಲ್ಲು ತೂರಾಟ ಮಾಡಿ ಜಖಂಗೊಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net