ಹುಲಿ ಉಗುರು: ನಟ ಜಗ್ಗೇಶ್‌ಗೂ ಎದುರಾಯ್ತು ಕಂಟಕ?

jaggesh
Published on

ಬೆಂಗಳೂರು: ಹುಲಿ ಉಗುರಿನ ಲಾಕೆಟ್​ ಧರಿಸಿರುವುದರಿಂದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದೆ. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದಲ್ಲಿ ಇದೀಗ ನಟ ಜಗ್ಗೇಶ್‌ಗೂ ಕಂಟಕ ಎದುರಾಗುವ ಸಾಧ್ಯತೆಗಳಿವೆ.

ಈ ಹಿಂದೆ ತಮ್ಮ ಬಳಿ ಹುಲಿ ಉಗುರು ಇರುವ ಬಗ್ಗೆ ಜಗ್ಗೇಶ್ ಬಹಿರಂಗವಾಗಿಯೇ ಹೇಳಿಕೆ‌ ನೀಡಿದ್ದರು. ಹುಲಿ ಉಗುರು ಧರಿಸುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. "ನನಗೆ 20 ವರ್ಷ ಆದಾಗ ನನ್ನಮ್ಮ ನನ್ನ ಮಗ ಹುಲಿ ಇದ್ದಂಗೆ ಇರಬೇಕು ಅಂತ ಹೇಳಿ ಒರಿಜಿನಲ್ ಹುಲಿ ಉಗುರಿನಲ್ಲಿ ಈ ಲಾಕೆಟ್ ಇರುವ ಸರ ಮಾಡಿಸಿ ಹಾಕಿದ್ದರು'' ಎಂದಿದ್ದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಹಲವರು, ವರ್ತೂರ್ ಸಂತೋಷ್ ಗೆ ಒಂದು ನ್ಯಾಯ, ಜಗ್ಗೇಶ್ ಗೆ ಒಂದು ನ್ಯಾಯ. ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರ ಬಂಧನ ಯಾವಾಗ? ಎಂದು ಪ್ರಶ್ನಿಸುತ್ತಿದ್ದಾರೆ.

ಅಂದಹಾಗೆ ನಟ ಜಗ್ಗೇಶ್ ಮನೆಗೆ‌ ಅರಣ್ಯಾಧಿಕಾರಿಗಳು ಇಂದು ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ಮಲ್ಲೇಶ್ವರಂನ ಜಗ್ಗೇಶ್ ಅವರ ನಿವಾಸಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಲಿದ್ದು, ದರ್ಶನ್, ರಾಕ್ ಲೈನ್ ವೆಂಕಟೇಶ್, ವಿನಯ್‌ ಗುರೂಜಿ ಬಳಿಕ ಈಗ ಜಗ್ಗೇಶ್ ಗೆ ಹುಲಿ ಉಗುರಿನ ಕಂಟಕ ಎದುರಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net