ಹುಲಿ ಹೆಜ್ಜೆ ಗುರುತು ಪತ್ತೆ

16-NPK -3
Published on

ನಾಪೋಕ್ಲು: ಇಲ್ಲಿಗೆ ಸಮೀಪದ ನರಿಯಂದಡ ಗ್ರಾಮದ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.

ನರಿಯಂದಡ ಗ್ರಾಮ ಪಂಚಾಯಿತಿಗೆ ಒಳಪಟ್ಟ ನರಿಯಂದಡ ಗ್ರಾಮದ ಪೊಕ್ಕೋಳಂಡ್ರ, ಮಕ್ಕಿಮನೆ ಕುಟುಂಬಸ್ಥರ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಚಲನ ವಲನ ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆ ಯನ್ನು ಸಂಪರ್ಕಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net