ಮಡಹಳ್ಳಿಯಲ್ಲಿ ಹುಲಿಗಳ ಹೆಜ್ಜೆ ಗುರುತು ಪತ್ತೆ

06-MAR-GPT-1
Published on

ಗುಂಡ್ಲುಪೇಟೆ: ಗ್ರಾಮದ ಸುತ್ತಮುತ್ತ ಸಂಚರಿಸುತ್ತಿರುವ ಹುಲಿಗಳನ್ನು ಸೆರೆಹಿಡಿಯುವಂತೆ ತಾಲೂಕಿನ ಮಡಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಗ್ರಾಮದ ಹಲವು ಜಮೀನುಗಳಲ್ಲಿ ಜೋಡಿ ಹುಲಿಗಳು ಸಂಚರಿಸುತ್ತಿವೆ. ಇದರಿಂದ ಜನರು ಭೀತಿಗೊಳಗಾಗಿದ್ದಾರೆ. ರೈತರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುತ್ತಿದ್ದಾರೆ. ಕೂಲಿ ಕೆಲಸಗಳಿಗೆ ಕಾರ್ಮಿಕರು ಬಾರದೆ ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಹುಲಿಗಳ ಸೆರೆಗೆ ಕ್ರಮಕೈಗೊಳ್ಳದೆ ಕೇವಲ ಪಟಾಕಿ ಸಿಡಿಸುತ್ತಿದ್ದಾರೆ. ಹುಲಿಗಳು ಜಾನುವಾರುಗಳ ಮೇಲೆ ಇಲ್ಲವೆ ಜನರ ಮೇಲೆ ದಾಳಿ ನಡೆಸಿದರೆ ಅರಣ್ಯ ಇಲಾಖೆ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net