ಹುಲ್ಲಹಳ್ಳಿಯಲ್ಲಿ ಹುಲಿ ಪ್ರತ್ಯಕ್ಷ

MDG tiger
Published on

ಹುಲ್ಲಹಳ್ಳಿ: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸಮೀಪದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಇದರಿಂದ ಹುಲ್ಲಹಳ್ಳಿ ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಬುಧವಾರ ರಾತ್ರಿ ಕಾರ್ಯ ಗ್ರಾಮದಿಂದ ರಸ್ತೆ ಮಾರ್ಗವಾಗಿ ಹುಲ್ಲಹಳ್ಳಿಗೆ ಬೈಕ್‌ನಲ್ಲಿ ಸಲ್ಮಾನ್ ಮತ್ತು ಪ್ರದ್ಯುಮ್ನ ಬರುತ್ತಿರುವಾಗ ರಸ್ತೆ ಮಧ್ಯದಲ್ಲಿ ಹುಲಿ ಕಾಣಿಸಿಕೊಂಡಿದೆ. ಈ ಹಿಂದೆಯೂ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ ಕಾರ್ಯ ಗ್ರಾಮದ ಬಳಿ ಹುಲಿ ಕಾಣಿಸಿಕೊಂಡಿತ್ತು. ಇದರಿಂದ ಆತಂಕಗೊಂಡಿರುವ ಗ್ರಾಮಸ್ಥರು ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net