ಸಫಾರಿಯಲ್ಲಿ ಹುಲಿ ದರ್ಶನ

28 HANUR 3
ಪಿ.ಜಿ ಪಾಳ್ಯ ವನ್ಯಜೀವಿ ವಲಯದ ಸಫಾರಿಯಲ್ಲಿ ಶನಿವಾರ ಪ್ರವಾಸಿಗರಿಗೆ ಕಾಣಿಸಿಕೊಂಡ ಹುಲಿ.
Published on

ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಪಿ.ಜಿ.ಪಾಳ್ಯ ವಲಯದಲ್ಲಿ ಆರಂಭಿಸಿರುವ ಸಫಾರಿಯಲ್ಲಿ ಹುಲಿ ದರ್ಶನವಾಗುತ್ತಿದ್ದು, ಪ್ರವಾಸಿಗರಲ್ಲಿ ಉತ್ಸಾಹ ಹೆಚ್ಚಿಸಿದೆ.

ಜಿಲ್ಲೆಯಲ್ಲಿ ಈಗಾಗಲೇ ಬಂಡೀಪುರ ಹಾಗೂ ಬಿಆರ್‌ಟಿಯ ಕೆ.ಗುಡಿಯಲ್ಲಿ ಸಫಾರಿ ವ್ಯವಸ್ಥೆ ಇದೆ. 3 ತಿಂಗಳ ಹಿಂದೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಗೋಪಿನಾಥಂನಲ್ಲಿ ಸಫಾರಿಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಡಿ.2ರಿಂದ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಪಿ.ಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಸಫಾರಿ ಆರಂಭಿಸಲಾಗಿದ್ದು, ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಈ ವೇಳೆ ಜಿಂಕೆ, ಆನೆ, ಕಾಡೆಮ್ಮೆ ಹಾಗೂ ಇನ್ನಿತರ ಪ್ರಾಣಿಗಳು ಮಾತ್ರ ಕಾಣಿಸಿಕೊಳ್ಳುತ್ತಿದ್ದವು. ಆದರೆ ಹುಲಿಯ ದರ್ಶನವಾಗಿರಲಿಲ್ಲ. ಇದರಿಂದ ಪ್ರವಾಸಿಗರಲ್ಲಿ ಬೇಸರ ವ್ಯಕ್ತವಾಗಿತ್ತು. ಜ.20 ರಂದು ಸಫಾರಿಯಲ್ಲಿ ಕಾಣಿಸಿಕೊಂಡಿದ್ದ ಹುಲಿರಾಯ ಶನಿವಾರ ಮತ್ತೆ ದರ್ಶನ ಭಾಗ್ಯ ನೀಡಿದ್ದು, ಪ್ರವಾಸಿಗರಲ್ಲಿ ಉತ್ಸಾಹ ಹೆಚ್ಚಿಸಿದೆ. ಇದರಿಂದ ಮುಂದಿನ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net