ಸೋಮೇಶ್ವರದಲ್ಲಿ ಹುಲಿ ಚರ್ಮ ವಶಕ್ಕೆ, 7 ಮಂದಿ ಬಂಧನ

crime
Published on

ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಬೈಕ್‌ನಲ್ಲಿ ಹುಲಿ ಚರ್ಮ, ಹುಲಿಯ ಉಗುರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಎರಡು ಬೈಕ್‌ನಲ್ಲಿ ಐದು ಮಂದಿ ಹುಲಿ ಚರ್ಮ ಸಾಗಿಸುತ್ತಿದ್ದರು. ಏಳು ಮಂದಿಯನ್ನು ಸ್ಥಳದಲ್ಲೇ ವಶಕ್ಕೆ ಪಡೆದು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಅಕ್ರಮ ಜಾಲದ ಒಟ್ಟು 7 ಮಂದಿ ಯುವಕರನ್ನು ಬಂಧಿಸಿ ಎರಡು ಬೈಕ್, ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ.

ಹೆಬ್ರಿ ಸಬ್ ಇನ್‌ಸ್ಪೆಕ್ಟರ್ ಮಹೇಶ್ ಟಿ.ಎಂ. ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಮಂಗಳವಾರ ಸಾಯಂಕಾಲ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಾರ್ಕಳ ನಗರ ಠಾಣೆ ಸಬ್ ಇನ್‌ಸ್ಪೆಕ್ಟರ್ ಮಧು ಮತ್ತು ಹೆಬ್ರಿಯ ಮಹೇಶ್ ಮತ್ತವರ ತಂಡ ಕಾರ್ಯಾಚರಣೆ ನಡೆಸಿದ್ದಾರೆ.

ಸ್ಥಳಕ್ಕೆ ಉಡುಪಿ ಎಸ್‌ಪಿ ವಿಷ್ಣುವರ್ಧನ್, ಕಾರ್ಕಳ ಡಿವೈಎಸ್‌ಪಿ ಭರತ್ ರೆಡ್ಡಿ ಭೇಟಿ ನೀಡಿ ಮುಂದಿನ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net