ಹುಲಿಗಿಯಲ್ಲಿ ಗೋಮಾತೆಗೆ ಪೂಜೆ

23 munirabad 01
Published on

ಮುನಿರಾಬಾದ್: ಉತ್ತರ ಕರ್ನಾಟಕದ ಸುಪ್ರಸಿದ್ಧ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ದೀಪಾವಳಿ ಬಲಿಪಾಡ್ಯ ನಿಮಿತ್ತ ಬುಧವಾರ ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಹಿಂದು ಧಾರ್ಮಿಕ ದತ್ತಿ ಇಲಾಖೆಯು ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿಯಂದು ಗೋವುಗಳಿಗೆ ವಿಶೇಷ ಪೂಜೆ ನಡೆಸಲು ಆದೇಶ ನೀಡಿತ್ತು.

ಗೋವುಗಳಿಗೆ ಅರಿಶಿಣ-ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸುಗಳನ್ನು ನೀಡಿ ಪೂಜಿಸಲಾಯಿತು. ದೇವಸ್ಥಾನ ಕಾರ್ಯದರ್ಶಿ ಎಂ.ಎಚ್. ಪ್ರಕಾಶ್ ರಾವ್, ಉಪಕಾರ್ಯದರ್ಶಿ ಬಸವರಾಜ, ಪ್ರಮುಖರಾದ ಈರಣ್ಣ ಈಡಿಗೇರ, ವೀರೇಶ ಶಿಲ್ಪಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net