ಮೈಸೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ 4ಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ವಿಚಾರವಾಗಿ ಹದ್ದಿನ ಕಣ್ಣು ಇರಿಸಲಾಗಿದೆ.
ನಗರಕ್ಕೆ ಗುರುವಾರ ಆಗಮಿಸಿದ ಎಸ್‌ಪಿಜಿ ಅಧಿಕಾರಿಗಳು ಮಹಾರಾಜ ಕಾಲೇಜು ಮೈದಾನ ಹಾಗೂ ನಗರದಲ್ಲಿ ಭದ್ರತೆಯನ್ನು ಪರಿಶೀಲಿಸಿದ್ದಾರೆ. ನರೇಂದ್ರ ಮೋದಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಆ ನಂತರ ಹೆಲಿಕಾಪ್ಟರ್ ಮೂಲಕ ಮಹಾರಾಜ ಕಾಲೇಜು ಮೈದಾನದ ಪಕ್ಕದಲ್ಲಿರುವ ಓವಲ್ ಮೈದಾನದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸಿ ನಂತರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮೂರು ಸುತ್ತಿನ ವೈಮಾನಿಕ ಸಮೀಕ್ಷೆ ನಡೆಸಲಾಯಿತು.
ಮೋದಿ ಆಗಮನದ ಹಿನ್ನೆಲೆಂುಲ್ಲಿ ನಗರದ ಸಂಚಾರ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ ಮಾಡಲು ಚರ್ಚೆಗಳು ನಡೆಯುತ್ತಿದ್ದು, ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಹಾಗೂ ವಾಹನ ಸಂಚಾರಕ್ಕೆ ಕಡಿವಾಣ ಬೀಳಲಿದೆ. ನರೇಂದ್ರ ಮೋದಿ ಅವರ ಭದ್ರತೆಗೊಸ್ಕರ ನಗರ ಪೊಲೀಸ್ ಆಯುಕ್ತರು, ಎಸ್ಪಿ, ಎಸಿಪಿಗಳು ಸೇರಿದಂತೆ 50ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌ಗಳು ಹಾಗೂ 1000 ಪೊಲೀಸರನ್ನು ನಿಂೋಜಿಸಲಾಗಿದೆ.