ಕಾರ್ಮಿಕರಿಗೆ ಪ್ರತಿಜ್ಞೆ ಬೋಧನೆ

Tikota 27-1
Published on

ತಿಕೋಟಾ: ದೇಶದ ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರ ಪ್ರಮುಖ ಅಡಚಣೆಯಾಗಿದೆ. ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ, ನಾಗರಿಕರು ಹಾಗೂ ಖಾಸಗಿ ವಲಯದ ಎಲ್ಲ ಪಾಲುಗಾರರು ಒಟ್ಟಾಗಿ ಕೆಲಸ ಮಾಡಬೇಕೆಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರುದ್ರಗೌಡರ ಸೊಲ್ಲಾಪುರ ಹೇಳಿದರು.

ಪಟ್ಟಣದ ಪಪಂ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರೋಧಿ ಸಪ್ತಾಹ ಕಾರ್ಯಕ್ರಮದಲ್ಲಿ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಮುಬಾಶೀರ್, ಕ್ಷಯ ರೋಗ ವಿಭಾಗದ ಅಧಿಕಾರಿ ರಾಜು ಭೋಸಲೆ, ಪೌರ ಕಾರ್ಮಿಕರು ಹಾಗೂ ಪಪಂ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net