ಗ್ರಾಪಂ ಸಿಬ್ಬಂದಿಗಿನ್ನು ಸಕಾಲಕ್ಕೆ ವೇತನ

Rmgm-Ph-001-Gramayana Harisandra - Story Photo-Gram Panchyth-19-5-2024
Published on

* ಜಿಪಂಗಳಿಗೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

ರಾಮನಗರ

ವೇತನ ಪಾವತಿಸದ ಕಾರಣಕ್ಕೆ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮ ಪಂಚಾಯಿತಿ ನೀರುಗಂಟಿ ಕಚೇರಿ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ಗ್ರಾಪಂ ಸಿಬ್ಬಂದಿಗೆ ಪ್ರತಿ ತಿಂಗಳ 5ನೇ ತಾರೀಕಿನ ಒಳಗೆ ವೇತನ ಪಾವತಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ಸಂಬಂ‘ ಸುತ್ತೋಲೆ ಹೊರಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರು, ಪ್ರತಿ ತಿಂಗಳ 5ನೇ ತಾರೀಕಿನೊಳಗೆ ಸಿಬ್ಬಂದಿಗೆ ವೇತನ ಪಾವತಿಸಬೇಕು. ಇದಕ್ಕೆ ತಪ್ಪಿದ್ದಲ್ಲಿ ಅಂತಹ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದು, ಇದನ್ನು ಮೇಲ್ವಿಚಾರಣೆ ಮಾಡುವಂತೆ ಜಿಪಂ ಸಿಇಒಗಳಿಗೆ ನಿರ್ದೇಶನ ನೀಡಿದ್ದಾರೆ.

2018ರ ಮಾ.01ರಿಂದಲೇ ಜಾರಿಗೆ ಬರುವಂತೆ ಸರ್ಕಾರದ ನಿಧಿಯಿಂದಲೇ ವೇತನ ಪಾವತಿಗೆ ಕ್ರಮವಹಿಸಲಾಗಿದೆ. ಗ್ರಾಪಂಗಳ ಇಎಫ್ಎಂಎಸ್ ಖಾತೆಗಳಿಗೆ ಹಣ ವರ್ಗಾಯಿಸಲಾಗುತ್ತಿದೆ.

ಇದರ ಹೊರತಾಗಿಯೂ ಗ್ರಾಪಂ ನೌಕರರಿಗೆ ನಿಗದಿತ ಸಮಯದಲ್ಲಿ ವೇತನ ಪಾವತಿಯಾಗದಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಗ್ರಾಪಂನಲ್ಲಿ ವೇತನ ಪಾವತಿಗೆ ಸಾಕಷ್ಟು ಅನುದಾನ ಇದ್ದರೂ ಸಮಯಕ್ಕೆ ಸರಿಯಾಗಿ ಸಿಬ್ಬಂದಿ ವೇತನ ಪಾವತಿಸದ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ವೇತನ ಪಾವತಿಸದಿದ್ದರೆ ಪತ್ರ ತಲುಪಿದ ಎರಡು ದಿನಗಳಲ್ಲಿ ಎಲ್ಲ ವೇತನವನ್ನು ಪಾವತಿಸಿ, ಯಾವುದೇ ಬಾಕಿ ಇರುವುದಿಲ್ಲ ಎನ್ನುವ ವರದಿಯನ್ನು ಆಯುಕ್ತಾಲಯಕ್ಕೆ ಸಲ್ಲಿಸುವಂತೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net