ಅ೦ಗನವಾಡಿ ಕಾರ್ಯಕರ್ತೆಯರ ಸಮಸ್ಯೆಗೆ ಕಾಲಮಿತಿಯಲ್ಲಿ ಪರಿಹಾರ

21 Dwd 8
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಮಕ್ಕಳ ಏಳಿಗೆಗೆ ನಿರಂತರ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕಾರ್ಯ ಶ್ಲಾಘನೀಯ. ನಿಮ್ಮೆಲ್ಲ ಸಮಸ್ಯೆಗಳನ್ನು ಈಡೇರಿಸಲು ಸರ್ಕಾರ ಕಾಲಮಿತಿಯಲ್ಲಿ ಪರಿಹಾರ ಒದಗಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಘಟಕದಿಂದ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ 3ನೇ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಸಮಾನತೆ ಕೊಟ್ಟವರು ಜಗಜ್ಯೋತಿ ಬಸವೇಶ್ವರ ಮತ್ತು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರರು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತಂದು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡುತ್ತಿದೆ ಎಂದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಪಕ್ಷಾತೀತ ಪ್ರಯತ್ನಿಸುತ್ತೇನೆ ಎಂದರು.

ಎಐಪಿಟಿಎಫ್ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದೊ0ದಿಗೆ ನಾವಿದ್ದು, ಎಲ್ಲ ಸಮಸ್ಯೆಗೆ ಸ್ಪಂದಿಸುತ್ತೇವೆ. ಗುತ್ತಿಗೆ ನೌಕರರಿಗೆ ನೀಡಿದ ವೈದ್ಯಕೀಯ ಸೌಲಭ್ಯವನ್ನು ನಿಮಗೂ ನೀಡಲು ಸರಕಾರಕ್ಕೆ ಆಗ್ರಹಿಸಲಾಗುವುದು ಎಂದರು.

ಸ0ಘದ ಜಿಲ್ಲಾಧ್ಯಕ್ಷೆ ರತ್ನಾ ಶಿರೂರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಚಂದ್ರಕಾ0ತ ಬೆಲ್ಲದ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಸವಿತಾ ಅಂಗಡಿ, ಎಫ್.ಬಿ. ಕಣವಿ, ಎಂ. ಜಯಮ್ಮ, ಶಂಕರ ಹಲಗತ್ತಿ, ಆರ್.ಎಫ್. ಕವಳಿಕಾಯಿ, ಎಚ್.ಎಚ್. ಕುಕನೂರ, ಕಮಲಾ ಬೈಲೂರ, ಎನ್.ಎಫ್. ಸಮುದ್ರಿ, ಚಿನ್ನಕ್ಕ ಅಂಗಡಿ, ಕಸ್ತೂರಿ ಬೇಂದ್ರೆ, ಭಾರತಿ ಹಳೇಮನಿ, ನಾಗಮ್ಮ ಒಣರೊಟ್ಟಿ, ನಿರ್ಮಲಾ ಕುಲಕರ್ಣಿ, ಶಿವಲೀಲಾ ನಡೂರಮಠ, ವಿಜಯಲಕ್ಷ್ಮೀ ಹಿರೇಮಠ, ಮಂಜುಳಾ ಯಡ್ರಾವಿ, ಲತಾ ಗೋಡಕೆ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net