

ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಪಡೆದರೆ ಕ್ಯಾನ್ಸರ್ ರೋಗವನ್ನು ಗೆಲ್ಲಬಹುದು ಎಂದು ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸರ್ಜನ್ ಡಾ.ಜಗದೀಶ್ ತುಬಚಿ ಹೇಳಿದರು.
ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯಿಂದ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕ್ಯಾನ್ಸರ್‌ನ್ನು ಪರಿಣಾಮಕಾರಿಯಾಗಿ ಎದುರಿಸಲು ದೇಶ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾನ್ಸರ್ ಆಸ್ಪತ್ರೆಗಳ ನಿರ್ಮಾಣದ ಅಗತ್ಯವಿದೆ ಎಂದು ಹೇಳಿದರು.
ಚಿತ್ರದುರ್ಗದಲ್ಲಿ ನಮ್ಮ ಆಸ್ಪತ್ರೆಯಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದಾಗಿದ್ದೇವೆ. ಸ್ತನ, ಗರ್ಭಕೋಶ ಕ್ಯಾನ್ಸರ್‌ಗೆ ತುತ್ತಾಗುವ ಹೆಣ್ಣು ಮಕ್ಕಳು ಕೂಡಲೇ ಚಿಕಿತ್ಸೆ ಪಡೆದುಕೊಳ್ಳ ಬೇಕು ಎಂದರು.
ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ ಡಾ.ಅಜಯ್, ಬಸವೇಶ್ವರ ವೈದ್ಯಕೀಯ ಕಾಲೇಜು ಪ್ರಾಚಾರ‌್ಯ ಡಾ.ಪ್ರಶಾಂತ್, ವೈದ್ಯಕೀಯ ಅಧೀಕ್ಷಕ ಡಾ.ಪಾಲಕ್ಷಪ್ಪ ಇತರರು ಇದ್ದರು.