ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶ

21-feb-hdl-01
Published on

ಹೂವಿನಡಹಗಲಿ: ತಾಲೂಕಿನ ತಿಪ್ಪಾಪುರ ಗ್ರಾಮದ ಬಳಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಪಟ್ಟಣದ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ

ಅಕ್ರಮ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಪಿಐ ಸುಧೀರ್‌ಕುಮಾರ್ ಬೆಂಕಿ ಮಾರ್ಗದರ್ಶನದಲ್ಲಿ ಪೊಲೀಸರ ತಂಡ ದಾಳಿ ಮಾಡಿದೆ. ಪೊಲೀಸರನ್ನು ನೋಡಿದ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. 19 ಟನ್ ತೂಕದ ಅಂದಾಜು 4.18 ಲಕ್ಷ ರೂ. ಬೆಲೆ ಬಾಳುವ ಅಕ್ಕಿ ಸಮೇತ ಲಾರಿಯನ್ನು ಜಪ್ತಿ ಮಾಡಿದ ಪೊಲೀಸರು, ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಕಾರ್ಯಚರಣೆಯಲ್ಲಿ ಆಹಾರ ನಿರೀಕ್ಷಕಿ ಪಿ.ವಾಣಿಶ್ರೀ ಪಿಎಸ್‌ಐ ಸಂತೋಷ್ ಡಬ್ಬಿನ್, ಎಎಸ್‌ಐ ರಾಜೇಂದ್ರನಾಯ್ಕ, ಪೊಲೀಸ್ ಇಲಾಖೆಯ ಸಿಬ್ಬಂದಿ ಎಂ.ಪಿ.ಎಂ ವೀರೇಶ, ದ್ವಾರಕೀಶ, ಆಹಾರ ಇಲಾಖೆಯ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net