ಬೈಕ್ ಸವಾರರಿಗೆ ಯಮಸ್ವರೂಪಿಯಾದ ಟಿಪ್ಪರ್

19102020 Kudligi Accident
Published on

ಮಂಡ್ಯ: ನಾಗಮಂಗಲ ತಾಲೂಕು ಗರುಡನಹಳ್ಳಿ ಬಳಿ ಶುಕ್ರವಾರ ಟಿಪ್ಪರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದ ಶಿವರಾಜು(32) ಮೃತ. ಈತ ತನ್ನ ತಂದೆಯೊಂದಿಗೆ ಬೈಕ್‌ನಲ್ಲಿ ಮಾಯಸಂದ್ರದಿಂದ ಯಡಿಯೂರು ಮಾರ್ಗವಾಗಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net