ದಾವಣಗೆರೆಯಲ್ಲಿ ಭೀಕರ ಅಪಘಾತ: ನಡುರಸ್ತೆಯಲ್ಲೇ ಹೊತ್ತಿಉರಿದ ಲಾರಿ-ಕಾರು

lorry and car fire
Published on

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 4ರ ಬೈಪಾಸ್‌ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ-ಕಾರು ರಸ್ತೆಯಲ್ಲೇ ಹೊತ್ತಿ ಉರಿದಿವೆ.

ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಕಾರು, ದಾವಣಗೆರೆಯ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡೂ ವಾಹನ ನಡುರಸ್ತೆಯಲ್ಲೇ‌ ಬೆಂಕಿಗೆ ಆಹುತಿಯಾಗಿವೆ.

ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ದಾವಣಗೆರೆ ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net