ಕಲ್ಲು ಸಾಗಣೆ ಮಾಡುತ್ತಿದ್ದ ಟಿಪ್ಪರ್ ವಶ

28-JAN-GPT-2
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಪರ್ಮಿಟ್ ಇಲ್ಲದೆ ಕಲ್ಲು ಸಾಗಣೆ ಮಾಡುತ್ತಿದ್ದ ಟಿಪ್ಪರನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Published on

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಪರ್ಮಿಟ್ ಇಲ್ಲದೆ ಕ್ರಶರ್‌ನಿಂದ ಕಲ್ಲು ಸಾಗಣೆ ಮಾಡುತ್ತಿದ್ದ ಟಿಪ್ಪರನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ದಂಡ ವಿಧಿಸಿದ್ದಾರೆ.

ಮಂಗಳವಾರ ಗಣಿ ಇಲಾಖೆಯ ಭೂವಿಜ್ಞಾನಿ ಮಲ್ಲೇಶ್ ಟಿಪ್ಪರ್ ದಾಖಲೆಗಳನ್ನು ಪರಿಶೀಲಿಸಿದಾಗ ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು ಸಾಗಣೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ವಾಹನವನ್ನು ವಶಕ್ಕೆ ಪಡೆದು ತೆರಕಣಾಂಬಿ ಪೊಲೀಸರಿಗೆ ನೀಡಿದ್ದಾರೆ. ಗಣಿ ಇಲಾಖೆ ವಿಧಿಸುವ ದಂಡ ಪಾವತಿಸಿದ ನಂತರ ಟಿಪ್ಪರ್ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net