ಪಠ್ಯದಲ್ಲಿರುವ ಟಿಪ್ಪು ವಿಷಯ ಕೈಬಿಡುವ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

Suresh Kumar 13 Jan 20
Published on

ಮೈಸೂರು: ಪಠ್ಯದಲ್ಲಿ ಟಿಪ್ಪುವಿನ ವಿಚಾರ ಪದೇಪದೇ ಚರ್ಚೆಗೀಡಾಗುತ್ತಿದ್ದು, ಸರ್ಕಾರದ ಕ್ರಮ ಏನು ಎಂಬ ಕುತೂಹಲ ಇದ್ದೇ ಇದೆ. ಈ ವಿಚಾರ ಮತ್ತು ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಸೇರಿ ಕೆಲವು ವಿಷಯಗಳ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಖಾತೆ ಹಂಚಿಕೆ ವಿಚಾರ. ಅದು‌ ಸಿಎಂ ಯಡಿಯೂರಪ್ಪ ಅವರಿಗೆ ಬಿಟ್ಟಿದ್ದು, ಹೀಗಾಗಲೇ ಕೆಲವರಿಗೆ ಹೆಚ್ಚುವರಿ ಖಾತೆ ನೀಡಿದ್ದಾರೆ. ಇವತ್ತು ಮತ್ತಷ್ಟು ಖಾತೆ ಹಂಚಿಕೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಹಾ ವಿಸ್ತರಣೆ ಆಗಲಿದೆ ಎಂದಿದ್ದಾರೆ.

ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸುರೇಶ್ ಕುಮಾರ್, ಖಂಡಿತವಾಗಿಯೂ ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಬೇಕು. ಮೈಸೂರು ಅಭಿವೃದ್ದಿಗಾಗಿ ಇಲ್ಲಿಯವರಿಗೆ ಸಚಿವ ಸ್ಥಾನ ಸಿಗಬೇಕು. ಮುಂದಿನ ದಿನದಲ್ಲಿ ಅದೂ ಆಗಲಿದೆ ಎಂದರು.

ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ವಿಚಾರ. ಸಹಜವಾಗಿ ಎಲ್ಲರಿಗೂ ಈ ಬಗ್ಗೆ ಆಕಾಂಕ್ಷೆಯಿದೆ. ಕೆಲವರು ಮೂರು ನಾಲ್ಕು ಬಾರಿ ಗೆದ್ದವರಿದ್ದಾರೆ. ಅವರ ಜಿಲ್ಲೆಯ ಅಭಿವೃದ್ದಿಗಾಗಿ ಸಚಿವ ಸ್ಥಾನ ಕೇಳುವುದು ಸಹಜ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವುರ, ಈ ಶೈಕ್ಷಣಿಕ ವರ್ಷದಲ್ಲಿ ಅದು ಸಾಧ್ಯವಿಲ್ಲ. ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವ ವಿಚಾರದ ಬಗ್ಗೆ ವಿಸ್ತೃತ ಚರ್ಚೆಯಾಗಬೇಕಿದೆ. ಈ ಬಗ್ಗೆ ಸಮಿತಿಯವರು ತಿಳಿಸಿದ್ದಾರೆ. ವಿಸ್ತೃತವಾದ ಇನ್ನೊಂದು ಸಮಿತಿ ಮಾಡಿ ಚರ್ಚೆ ಮಾಡಲಾಗುವುದು. ನಂತರವಷ್ಟೇ ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಪುಸ್ತಕ ಮತ್ತು ಸಮವಸ್ತ್ರ ವಿತರಣೆ, ಪೂರೈಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಶಾಲೆಯ ಆರಂಭದ ದಿನದಿಂದಲೇ ಪುಸ್ತಕ ಮತ್ತು ಸಮವಸ್ತ್ರ ನೀಡಲಾಗುವುದು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net