

ಮುಂಡರಗಿ: ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನವನ್ನು ಸ್ಮರಿಸಬೇಕು ಎಂದು ತಾ.ಪಂ. ಇಒ ವಿಶ್ವನಾಥ ಹೊಸಮನಿ ಹೇಳಿದರು.
ಪಟ್ಟಣದ ಪುರಸಭೆ ಮೈದಾನದಲ್ಲಿ ತಾಲೂಕು ಆಡಳಿತ, ತಾ.ಪಂ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು.
‘ಸ್ವಾತಂತ್ರ್ಯ ದೊರೆತ ನಂತರ ದೇಶದ ಕಾನೂನು ರಚಿಸುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ಮಕ್ಕಳು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡುವ ಮೂಲಕ ಸಂವಿಧಾನಕ್ಕೆ ತಮ್ಮದೆ ಆದ ಕೊಡುಗೆ ನೀಡಬೇಕು’ ಎಂದರು.
ತಹಸೀಲ್ದಾರ್ ಧನಂಜಯ್ ಎಂ. ಸಂವಿಧಾನ ಪೀಠಿಕೆ ಓದುವ ಮೂಲಕ ಸಾಮೂಹಿಕವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ನಾಗರಾಜ ಹೊಂಬಳಗಟ್ಟಿ, ರೈಮಾನಸಾಬ ಮಲ್ಲನಕೇರಿ, ಹೇಮಂತಗೌಡ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಎಂ.ಎ.ನೂರುಲ್ಲಾಖಾನ್, ಸಿಪಿಐ ಮಂಜುನಾಥ ಕುಸಗಲ್, ಬಿಇಒ ಗಂಗಾಧರ ಅಣ್ಣಿಗೇರಿ ಇತರರು ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಯಲಿವಾಳ ಪ್ರಾಸ್ತವಿಕವಾಗಿ ಮಾತನಾಡಿದರು.