

ಸವಣೂರ: ಸಾಲ ಬಾಧೆಗೆ ಬೇಸತ್ತ ರೈತನೊಬ್ಬ ರಸ್ತೆ ಬದಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಸವೂರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಗ್ರಾಮದ ರೈತ ಬಸಪ್ಪ ಯಲ್ಲಪ್ಪ ಗೊಡ್ಡೆಮ್ಮಿ (48) ಆತ್ಮಹತ್ಯೆ ಮಾಡಿಕೊಂಡ ರೈತ. ತನ್ನ 5 ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಿಂಡಿಕೇಟ್ ಬ್ಯಾಂಕ್, ಐಡಿಎಫ್ ಬ್ಯಾಂಕ್ ಸೇರಿದಂತೆ ವಿವಿಧೆಡೆ ಮಾಡಿದ್ದ ಸುಮಾರು 4.05 ಲಕ್ಷ ರೂಪಾಯಿ ಸಾಲ ತೀರಿಸಲು ಆಗದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.