ಜೀವನದಲ್ಲಿ ಬೇಸತ್ತು ಆತ್ಮಹತ್ಯೆ

Published on

ಹೊನ್ನಾವರ: ಜೀವನದಲ್ಲಿ ಬೇಸತ್ತು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಡ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದೂರು ಸಮೀಪ ನಡೆದಿದೆ. ಚಿಕ್ಕೊಳ್ಳಿಯ ಪ್ರಶಾಂತ ಈಶ್ವರ ನಾಯ್ಕ (37) ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

ಮಂಗಳವಾರ ಬೆಳಗ್ಗೆ ಕಾರಿನಲ್ಲಿ ಮನೆಯಿಂದ ಹೊರಟವನು ನಾಪತ್ತೆಯಾಗಿದ್ದ. ಈ ಕುರಿತು ರಾತ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಾಲೂಕಿನ ವಿವಿಧೆಡೆ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಬುಧವಾರ ಗೇರುಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಗಮನಿಸಿದ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net