ತಿರುಮಲಾಪುರ ಡೇರಿ ಜೆಡಿಎಸ್ ಹಿಡಿತಕ್ಕೆ

ಪಾಂಡವಪುರ ತಾಲೂಕಿನ ತಿರುಮಲಾಪುರ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯಲ್ಲಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ನಿರ್ದೇಶಕರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದಿಸಿದರು.
ಪಾಂಡವಪುರ ತಾಲೂಕಿನ ತಿರುಮಲಾಪುರ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯಲ್ಲಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ನಿರ್ದೇಶಕರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದಿಸಿದರು.
Published on

ಪಾಂಡವಪುರ: ತಾಲೂಕಿನ ತಿರುಮಲಾಪುರ(ತಿರುಮಲಾಪುರ) ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 9 ಸ್ಥಾನಗಳ ಪೈಕಿ 8 ಸ್ಥಾನಗಳಲ್ಲಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ನಿರ್ದೇಶಕರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಚುನಾವಣೆಯಲ್ಲಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ನಿರ್ದೇಶಕರಾದ ಮಂಜುಳಾ, ಲೀಲಾವತಿ, ಶ್ವೇತಾ, ರಾಧಾ, ಜಯಲಕ್ಷ್ಮಿ, ರತ್ನಮ್ಮ, ಭಾಗ್ಯಮ್ಮ, ಸಾವಿತ್ರಮ್ಮ ಅವರನ್ನು ಅಭಿನಂದಿಸಿ ಬಳಿಕ ಮಾತನಾಡಿದ ಅವರು, ತಾಲೂಕಿನ ತಿರುಮಲಾಪುರ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ 9 ಸ್ಥಾನಗಳಲ್ಲಿ ಪೈಕಿ 8 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಅಭೂತಪೂರ್ವ ಕೆಲವು ಸಾಧಿಸುವ ಮೂಲಕ ಪಕ್ಷವನ್ನು ಬಲಪಡಿಸಿದ್ದಾರೆ. ತಾಲೂಕಿನಲ್ಲಿ ನಡೆದ ಬಹುತೇಕ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವ ಮೂಲಕ ಸಂಘದ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎದುರಾಗುವ ಸ್ಥಳೀಯ ಸಂಸ್ಥೆಯ ಚುನಾವಣೆಗೆ ಈ ಚುನಾವಣೆಗಳ ಫಲಿತಾಂಶಗಳು ಕ್ಸೂಚಿಯಾಗಲಿವೆ ಎಂದರು.

ಈ ವೇಳೆ ಮುಖಂಡರಾದ ದೇಶವಹಳ್ಳಿ ಪ್ರಭಾಕರ್, ಕೆಂಚನಹಳ್ಳಿ ವೇಣುಗೋಪಾಲ್, ಕೆ.ಎನ್.ನಾಗೇಗೌಡ, ಕೆರೆತೊಣ್ಣೂರು ಸೊಸೈಟಿ ಅಧ್ಯಕ್ಷ ಶ್ರೀನಿವಾಸ್, ನಿರ್ದೇಶಕ ವಿಜೇಂದ್ರ, ಕೃಷ್ಣಮೂರ್ತಿ, ಗ್ರಾಪಂ ಸದಸ್ಯರಾದ ಲೋಕೇಶ್, ಸೋಮಶೇಖರ್, ಕುಂಟೇಗೌಡ, ನಾಗಣ್ಣ, ಕೃಷ್ಣೇಗೌಡ, ಟ್ರಾನ್ಸ್‌ಪೋರ್ಟ್ ಮಾಲೀಕ ತಿಮ್ಮೇಗೌಡ, ಮಧು, ಹೊನ್ನರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net