ತಿರುಪತಿ ತಿಮ್ಮಪ್ಪ ಕೃತಿ ಲೋಕಾರ್ಪಣೆ

Prof S. K. Ramachandrarao
Published on

ಬೆಂಗಳೂರು: ಅಭಿಜ್ಞಾನ ವತಿಯಿಂದ ಭಾನುವಾರ (ಸೆ.1 ರಂದು) ಬೆಳಗ್ಗೆ 10.30ಕ್ಕೆ ಬಸವನಗುಡಿಯ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯಲ್ಲಿ ಸಾ.ಕೃ. ರಾಮಚಂದ್ರರಾವ್ ಅವರ ‘ತಿರುಪತಿ ತಿಮ್ಮಪ್ಪ’ ಮಹಾಕೃತಿ ಲೋಕಾರ್ಪಣೆ ಸಮಾರಂಭ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕೃತಿಯ ಲೋಕಾರ್ಪಣೆ ಮಾಡಲಿದ್ದಾರೆ. ವಿದ್ವಾಂಸ ಟಿ.ವಿ. ವೆಂಕಟಾಚಲ ಶಾಸೀ ಅತಿಥಿಗಳಾಗಿ ಭಾಗವಹಿಸಲಿದ್ದು, ಕರ್ನಾಟಕ ರಾಜ್ಯ ಮುಕ್ತ ವಿವಿ ಸಹಾಯಕ ಪ್ರಾಧ್ಯಾಪಕ ಶಲ್ವಪಿಳ್ಳ ಅಯ್ಯಂಗಾರ್ ಗ್ರಂಥ ಪರಿಚಯ ಮಾಡಿಕೊಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net