ಟಿ.ಕೆ.ಆನಂದಪ್ಪ ಸೊಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ

25 TKE 5
Published on

ತರೀಕೆರೆ: ಅಜ್ಜಂಪುರ ತಾಲೂಕಿನ ಸೊಕ್ಕೆ ಗ್ರಾಪಂ ನೂತನ ಅಧ್ಯಕ್ಷರಾಗಿ ಟಿ.ಕೆ.ಆನಂದಪ್ಪ ಅವಿರೋಧ ಆಯ್ಕೆಯಾದರು. ಹಿಂದಿನ ಆಧ್ಯಕ್ಷ ಜಿ.ಬಸವರಾಜಪ್ಪ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಆನಂದಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಗೋವಿಂದಪ್ಪ ಅವಿರೋಧ ಆಯ್ಕೆ ಪ್ರಕಟಿಸಿದರು. ಅಭಿನಂದನೆ ಸ್ವೀಕರಿಸಿ ನೂತನ ಅಧ್ಯಕ್ಷ ಆನಂದಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಸಮಾನವಾಗಿ ಅಭಿವೃದ್ಧಿ ಪಡಿಸುವ ಯೋಜನೆ ಜತೆ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗುವುದು ಎಂದರು. ಉಪಾಧ್ಯಕ್ಷೆ ರೇಖಾ, ಸದಸ್ಯರಾದ ಸುಲೋಚನಮ್ಮ, ಸರೋಜಮ್ಮ, ಪಿಡಿಒ ಬಿ.ಒ.ಯಾಶಿಕಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net