

ತುಮಕೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾವೇಂದ್ರ ಶೆಟ್ಟಿಗಾರ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲಾ ಬಾಲಭವನದಲ್ಲಿ ಗುರುವಾರ ಆಯೋಜಿಸಿದ್ದ ಪ್ಯಾನ್ ಇಂಡಿಯಾ ಕಾನೂನು ಅರಿವು ಅಭಿಯಾನ ಹಾಗೂ ಪೋಕ್ಸೋ ಕಾಯ್ದೆ, ವಾನವ ಮಕ್ಕಳ ಅಕ್ರಮ ಸಾಗಣೆ, ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಕುರಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪುರಾತನ ಕಾಲದಿಂದಲೂ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಿದ್ದರೂ, ಅವರ ಮೇಲೆ ದೌರ್ಜನ್ಯ ನಡೆಯುತ್ತಿವೆ. ದೌರ್ಜನ್ಯ ಪ್ರಕರಣಗಳ ನಿಯಂತ್ರಣಕ್ಕಾಗಿ ಕಾನೂನುಗಳನ್ನು ಜಾರಿಗೆ ತರಲಾಗಿದೆ. ದೌರ್ಜನ್ಯ ತಡೆ ಕಾನೂನಿನಲ್ಲಿ ಹಲವಾರು ತಿದ್ದುಪಡಿ ತಂದು ಮಹಿಳೆಯರ ನತೆಗೆ ಅಗೌರವ ತರುವ ಅಂಶಗಳನ್ನು ತೆಗೆದುಹಾಕಿ ಮಹಿಳೆಯರ ರಕ್ಷಣೆಗೆ ಕಾನೂನನ್ನು ಬಲಪಡಿಸಲಾಗಿದೆ. ಈ ಕಾನೂನುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
ಕೆಲಸದ ಸ್ಥಳದಲ್ಲಿ ಮಹಿಳೆ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲು ಅವಕಾಶವಿದ್ದು, ದೌರ್ಜನ್ಯ ನಡೆದಾಗ ಮಹಿಳೆಯರು ಧೈರ್ಯದಿಂದ ದೂರು ನೀಡಬೇಕು. ಮಹಿಳೆಯರ ರಕ್ಷಣೆಗಿರುವ ಕಾನೂನುಗಳ ಬಗ್ಗೆ ಹಾಗೂ ಧೈರ್ಯದಿಂದ ದೂರು ನೀಡುವ ನಿಟ್ಟಿನಲ್ಲಿ ಅರಿವು ಮೂಡಿಸಲು ಅಧಿಕಾರಿ ವರ್ಗ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಸಾಮಾಜಿಕ ಜವಾಬ್ದಾರಿಯ ಜೊತೆಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಾನೂನು ಉಲ್ಲಂನೆ, ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರೂ ಕುಟುಂಬದ ಬಗ್ಗೆ ಕಾಳಜಿ ಹಾಗೂ ಜವಾಬ್ದಾರಿ ಬೆಳೆಸಿಕೊಂಡರೆ ಸವಾಜ ತಾನಾಗಿಯೇ ಸ್ವಾಸ್ಥ್ಯವಾಗುತ್ತದೆ. ಎಂ.ಎಸ್.ಶ್ರೀಧರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ