ತುಮಕೂರು ಜಿಲ್ಲೆ ಅಂಗನವಾಡಿಗಳಲ್ಲಿ ಯಾವ್ಯಾವ ಹುದ್ದೆಗಳಿವೆ?

ang jpg
Published on

ತುಮಕೂರು: ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆ ಒಟ್ಟು 202 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕರ್ತೆ -21, ಸಹಾಯಕಿ-163, ಮಿನಿ ಅಂಗನವಾಡಿ ಕಾರ್ಯಕರ್ತೆ -18 ಹುದ್ದೆಗಳಿವೆ.

ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್​ಲೈನ್​​ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅರ್ಜಿಗಳನ್ನು ಜುಲೈ 18 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ https://anganwadirecruit.kar.nic.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net