ತಿ.ನರಸೀಪುರ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಸೆ.6ರಂದು ಶಿಕ್ಷಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಹಳೇ ತಿರುಮಕೂಡಲು ಬಳಿ ಇರುವ ಶ್ರೀನಿವಾಸ ಹಾಲ್‌ನಲ್ಲಿ ಅಂದು
ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ, ಪ್ರಶಸ್ತಿ ಪುರಸ್ಕೃತರಿಗೆ
ಅಭಿನಂದನೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಂಸದ ಸುನೀಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ವಿವೇಕಾನಂದ, ಪುರಸಭೆ ಅಧ್ಯಕ್ಷೆ ವಸಂತ ಶ್ರೀಕಂಠ ಇತರರು ಭಾಗವಹಿಸಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ತಿಳಿಸಿದ್ದಾರೆ.