

ತಿ.ನರಸೀಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.52.04 ಫಲಿತಾಂಶ ದೊರಕಿದೆ. ಪರೀಕ್ಷೆ ಬರೆದ 377 ವಿದ್ಯಾರ್ಥಿಗಳಲ್ಲಿ 197 ಜನ ತೇರ್ಗಡೆಯಾಗಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 9 ಹಾಗೂ ಪ್ರಥಮ ದರ್ಜೆಯಲ್ಲಿ 103 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ರಮ್ಯಾ 560, ವಾಣಿಜ್ಯ ವಿಭಾಗದಲ್ಲಿ ಚಂದನಾ 540 ಹಾಗೂ ವಿಜ್ಞಾನ ವಿಭಾಗದಲ್ಲಿ ಹೇಮಾವತಿ 520 ಅಂಕ ಗಳಿಸಿ ಕಾಲೇಜಿಗೆ ಟಾಪರ್ ಆಗಿದ್ದಾರೆಂದು ಪ್ರಾಂಶುಪಾಲ ಡಿ.ಸಿ. ಲಿಂಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.