ಸಾಧನೆಗೆ ದೃಢ ಸಂಕಲ್ಪ ಮುಖ್ಯ

14Jaggu41
ಬೆಳಗಾವಿ ಕೆಎಲ್‌ಇ ಸಂಸ್ಥೆಯ ಪ್ರೇರಣಾ ಪಪೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಈಚೆಗೆ ಆಯೋಜಿ ಸಿದ್ದ ‘ಸಂಕಲ್ಪ 2ಕೆ 24’ ಕಾರ್ಯಕ್ರಮದಲ್ಲಿ 2023- 24ರ ಸಾಲಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮಹಾಂತೇಶ ಕವಟಗಿಮಠ, ಡಾ.ಸಿ.ಎಂ. ತ್ಯಾಗರಾಜ, ಡಾ. ಸಿದ್ದು ಅಲಗೂರ ಇದ್ದರು.
Published on

ಬೆಳಗಾವಿ: ವಿದ್ಯಾರ್ಥಿಗಳು ದೃಢವಾದ ಸಂಕಲ್ಪ ಮಾಡಿ, ಏನನ್ನಾ ದರೂ ಸಾಧಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾ ಲಯದ ಕಲಪತಿ ಡಾ.ಸಿ.ಎಂ. ತ್ಯಾಗರಾಜ ಹೇಳಿದರು.

ನಗರದ ಕೆಎಲ್‌ಇ ಸಂಸ್ಥೆಯ ಪ್ರೇರಣಾ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಈಚೆಗೆ ಆಯೋಜಿಸಿದ್ದ ‘ಸಂಕಲ್ಪ 2ಕೆ 24’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಜ್ಞಾನ ವಿದ್ಯಾರ್ಥಿಗಳು ಸಾಧನೆಗೆ ಭೂಮಿಕೆ ಸಿದ್ಧಪಡಿಸಿಕೊಳ್ಳಬೇಕು. ಥಾಮಸ್ ಅಲ್ವಾ ಎಡಿಸನ್, ಮೆರಿಟ್ ಸಿಂಗರ್ ಸೇರಿ ಅನೇಕ ಹೆಸರಾಂತ ವಿಜ್ಞಾನಿಗಳ ಜೀವನವನ್ನು ಮಾದರಿಯಾಗಿ ಇಟ್ಟುಕೊಂಡು, ಮುನ್ನೆಡೆಯಬೇಕು ಎಂದು ಸಲಹೆ ನೀಡಿದರು.

ಕೆಎಲ್‌ಇ ಸಂಸ್ಥೆಯ ನಿರ್ದೇಶಕ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯಿಂದಲೇ ಭಾರತ ಶ್ರೀಮಂತವಾಗಬೇಕಿದೆ. ಈ ನಿಟ್ಟಿನಲ್ಲಿ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ಮಾಡಿ ಕೆಎಲ್‌ಇ ಸಂಸ್ಥೆಯ ಹೆಸರು ತರಬೇಕು ಎಂದರು. ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಸಿದ್ದು ಅಲಗೂರ ವೇದಿಕೆಯಲ್ಲಿದ್ದರು. ಗಣ್ಯರ ಸನ್ಮಾನ ಹಾಗೂ ಬಳಿಕ 2023-24ರ ಸಾಲಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಸ್. ಶ್ರೀಕಾಂತ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net