

ಕೋಟ: ಗುರುವಿನ ಸ್ಥಾನ ಶ್ರೇಷ್ಠವಾದದ್ದು. ಅದನ್ನು ಅರಿತು ಅವರನ್ನು ಗೌರವಿಸಿ ನಡೆಯುವುದೇ ಅವರಿಗೆ ಸಲ್ಲಿಸುವ ಗುರುವಂದನೆಯಾಗಿದೆ ಎಂದು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಹೇಳಿದರು.
ಕೋಟದ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಸ್ನೇಹಕೂಟ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಿವೃತ್ತ ಮುಖ್ಯ ಶಿಕ್ಷಕ ಜಿ.ರಾಮಚಂದ್ರ ಐತಾಳ್ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಜಪಾನ್ ಮಿಯಾಸಾಕಿ ವಿಶ್ವವಿದ್ಯಾಲಯ ಪ್ರೊಫೆಸರ್ ಹರೀಶ್‌ಕುಮಾರ್ ಮಧ್ಯಸ್ಥ ಗುರುವಂದನೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್, ಹಂದಾಡಿ ಗ್ರಾಪಂ ಕಾರ್ಯದರ್ಶಿ ಪೂರ್ಣಿಮಾ ಅಧಿಕಾರಿ, ಸ್ನೇಹಕೂಟ ಸಂಚಾಲಕಿ ಭಾರತಿ ವಿ.ಮಯ್ಯ, ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು.
ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಸ್ನೇಹಕೂಟದ ಗಾಯಿತ್ರಿ ಹೊಳ್ಳ ಸನ್ಮಾನ ಪತ್ರ ವಾಚಿಸಿದರು. ಸುಜಾತಾ ಬಾಯರಿ ನಿರೂಪಿಸಿದರು. ಸುವರ್ಣಲತಾ ಟೀಚರ್ ವಂದಿಸಿದರು. ಪಂಚವರ್ಣದ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.