ಚೆಕ್‌ಪೋಸ್ಟ್‌ಗೆ ಡಿವೈಎಸ್‌ಪಿ ಭೇಟಿ

7Kagwad-1-Web
ಕಾಗವಾಡ ಚೆಕ್‌ಪೋಸ್ಟ್‌ಗೆ ಗುರುವಾರ ಅಥಣಿ ಡಿವೈಎಸ್‌ಪಿ ಎಸ್.ವಿ.ಗಿರೀಶ ಭೇಟಿ ನೀಡಿ ಪರಿಶೀಲಿಸಿದರು.
Published on

ಕಾಗವಾಡ: ಸಮೀಪದ ಕಾಗವಾಡ-ಮೈಶಾಳ ಚೆಕ್‌ಪೋಸ್ಟ್‌ಗೆ ಅಥಣಿ ಡಿವೈಎಸ್‌ಪಿ ಎಸ್.ವಿ.ಗಿರೀಶ, ಸಿಪಿಐ ಶಂಕರಗೌಡ ಬಸಗೌಡರ, ಕಾಗವಾಡ ಪಿಎಸ್‌ಐ ಹನುಮಂತ ಶಿರಹಟ್ಟಿ ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು. ಡಿವೈಎಸ್‌ಪಿ ಎಸ್.ವಿ.ಗಿರೀಶ ಮಾತನಾಡಿ, ಹೊರ ರಾಜ್ಯಗಳಿಂದ ಬರುವ ವ್ಯಕ್ತಿಗಳ ಆರೋಗ್ಯ ತಪಾಸಣೆ ನಡೆಸಿ ನಂತರ ರಾಜ್ಯಕ್ಕೆ ಪ್ರವೇಶಿಸಲು ಅನುವು ಮಾಡಿಕೊಡಲಾಗುತ್ತಿದೆ ಎಂದರು.

ಕಾಗವಾಡ ಕಂದಾಯ ಇಲಾಖೆ ಅಧಿಕಾರಿಗಳು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಕಾಗವಾಡ ಪೋಲಿಸ್ ಠಾಣೆಯ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net