ಪ್ರತಿಭಟನೆ ನಾಟಕವಾಡಲು ದೆಹಲಿಗೆ: ಕೆಎಸ್‌ಇ ಲೇವಡಿ

k s eshwarappa
ಕೆ.ಎಸ್.ಈಶ್ವರಪ್ಪ, ಮಾಜಿ ಡಿಸಿಎಂ.
Published on

ಶಿವಮೊಗ್ಗ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿರುವ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರಿಗೇ ಅನುಮಾನವಿದೆ. ಹೀಗಾಗಿ ಕಾಂಗ್ರೆಸ್‌ನ ಎಲ್ಲ ಶಾಸಕರನ್ನು ದೆಹಲಿ ಪಿಕ್ನಿಕ್‌ಗೆ ಕರೆದೊಯ್ಯುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ತೆರಿಗೆ ಪಾಲು ಬಾಕಿ ಉಳಿದಿದ್ದರೆ ಸಿಎಂ ಹಾಗೂ ಡಿಸಿಎಂ ದೆಹಲಿಗೆ ತೆರಳಿ ಸಂಬಂಧಪಟ್ಟ ಸಚಿವರು, ಅಗತ್ಯ ಬಿದ್ದರೆ ಪ್ರಧಾನಿ ಜತೆಯೂ ಚರ್ಚಿಸಬಹುದಿತ್ತು. ಅದನ್ನು ಬಿಟ್ಟು ಯುದ್ಧಕ್ಕೆ ಹೊರಟವರಂತೆ ಎಲ್ಲ ಶಾಸಕರನ್ನೂ ದೆಹಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದರು.
ಕಾಂಗ್ರೆಸ್‌ನವರು ದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಯಾರೂ ಆಕ್ಷೇಪಿಸಿಲ್ಲ. ಆದರೆ ಅವರೆಲ್ಲರೂ ಅಲ್ಲಿಗೆ ಹೋಗುತ್ತಿರುವುದು ಸರ್ಕಾರದ ಹಣದಲ್ಲಿ. ಇದಕ್ಕಾಗಿ ಲಕ್ಷಾಂತರ ರೂ. ಖರ್ಚ ಮಾಡಿ ಜಾಹೀರಾತು ನೀಡಿದ್ದಾರೆ. ಬಹುಶಃ ಕಾಂಗ್ರೆಸ್ ದಿವಾಳಿಯಾಗಿರಬಹುದು ಎಂದು ಟೀಕಿಸಿದರು.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದ ಸಂದರ್ಭದಲ್ಲೇ ತೆರಿಗೆ ಹಣದ ಸಂಬಂಧ ಚರ್ಚಿಸಬಹುದಿತ್ತು. ಅದನ್ನು ಬಿಟ್ಟು ಈಗ ದೆಹಲಿಯಲ್ಲಿ ಪ್ರತಿಭಟನೆ ನಾಟಕ ಮಾಡಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net