ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ

20Itagi1
Published on

ಇಟಗಿ: ಗ್ರಾಮಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ಮೂಲಕ ಉತ್ತಮ ಆರೋಗ್ಯದತ್ತ ಕಾಳಜಿ ವಹಿಸುವುದು ಮುಖ್ಯವಾಗಿದೆ. ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ಸಮೀಪದ ದೇವಲತ್ತಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಡಿ ನೂತನವಾಗಿ ನಿರ್ಮಿಸಿದ ನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಟಕ ಮತ್ತು ಕಾಮಸಿನಕೊಪ್ಪ ಗ್ರಾಮದಲ್ಲಿ ಈಚೆಗೆ ಅಡುಗೆ ಕೋಣೆ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ನರೇಗಾ ಯೋಜನೆ ಸಹಾಯಕ ನಿರ್ದೇಶಕಿ ರೂಪಾಲಿ ಬಡಕುಂದ್ರಿ ಮಾತನಾಡಿ, ಗ್ರಾಮೀಣ ಜನರಿಗೆ ನರೇಗಾ ಆಶಾಕಿರಣವಾಗಿದ್ದು, ಜೀವನೋಪಾಯಕ್ಕೆ ದಾರಿಯಾಗಿದೆ ಎಂದರು. ಗ್ರಾಪಂ ಅಧ್ಯೆ ಶ್ರೀದೇವಿ ಚಲವಾದಿ, ಉಪಾಧ್ಯೆ ಮಂಜುಳಾ ನಿಡಗಲಕರ, ಗ್ರಾಪಂ ಮಾಜಿ ಅಧ್ಯ ರಾಜಶೇಖರ ಕಮ್ಮಾರ, ಪಿಡಿಒ ಎಸ್​.ಆರ್​.ಮರಡಿ,

ಕಾರ್ಯದರ್ಶಿ ಓಂಕಾರ ಮಾಯಾಂಚೆ, ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net