ಗಣೇಶನಿಗೆ ಸಂಭ್ರಮದ ವಿದಾಯ

3
Published on

ಚಿಕ್ಕೋಡಿ: ಪಟ್ಟಣದ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಸಮಾರಂಭಕ್ಕೆ ಪುರಸಭೆ ಅಧ್ಯಕ್ಷೆ ವೀಣಾ ಕವಟಗಿಮಠ, ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಹಾಗೂ ಸಂಪಾದನಾ ಸ್ವಾಮೀಜಿ ಚಾಲನೆ ನೀಡಿದರು.

ಪಟ್ಟಣದ ಸಾರ್ವಜನಿಕ ಗಣೇಶ ಮೂರ್ತಿಗಳು ಬಸ್ ನಿಲ್ದಾಣ ಬಳಿ ಒಂದೇಡೆ ಸೇರಿದ ಬಳಿಕ ಗಣ್ಯರು ಮೆರವಣಿಗೆಗೆ ಚಾಲನೆ ನೀಡಿದರು.

ವಾದ್ಯಮೇಳ ಸಹಿತ ಮೆರವಣಿಗೆಯಲ್ಲಿ ಮಹಿಳೆಯರು, ಮಕ್ಕಳು, ಯುವಕ-ಯುವತಿಯರು ಸಂಭ್ರಮದಿಂದ ಕುಣಿದು ಕುಪ್ಪಳಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಜಗದೀಶ ಕವಟಗಿಮಠ, ಪ್ರವೀಣ ಕಾಂಬಳೆ, ಸಂಜಯ ಕವಟಗಿಮಠ, ತಹಸೀಲ್ದಾರ್ ಚಿದಂಬರ ಕುಲಕರ್ಣಿ, ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗಲಾ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾಗನೂರ, ಅನಿಲ ಮಾನೆ, ಶಾಂಭವಿ ಅಶ್ವತ್ಥಪುರ, ಶಕುಂತಲಾ ಡೊಣವಾಡೆ, ವಿಶ್ವನಾಥ ಕಾಮಗೌಡ, ಸತೀಶ ಅಪ್ಪಾಜಿಗೋಳ, ಸಿದ್ದಪ್ಪ ಡಂಗೇರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net