ಉದ್ಯೋಗ ಪಡೆಯಲು ಅಂಕದ ಜತೆಗೆ ಕೌಶಲವೂ ಬೇಕು

Oplus_131072
Oplus_131072
Published on

ವಿರಾಜಪೇಟೆ : ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನದಡಿಯಲ್ಲಿ (ಪಿ.ಎಂ-ಉಷಾ) ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಉದ್ಯೋಗಾವಕಾಶಕ್ಕಾಗಿ ಕೌಶಲ ವಿಷಯ ಕುರಿತು ಇತ್ತೀಚೆಗೆ ಕಾಲೇಜಿನಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ ಆಯೋಜಿಸಲಾಗಿತ್ತು.

ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಅಂಕಗಳು ಇದ್ದರೆ ಮಾತ್ರ ಸಾಧ್ಯವಿಲ್ಲ. ಅದರ ಜತೆಗೆ ಕೌಶಲ ಕೂಡ ಇರಬೇಕು. ವಿದ್ಯಾರ್ಥಿಗಳು ಓದುವ ಸಮಯದಲ್ಲೇ ಉದ್ಯೋಗಕ್ಕೆ ಬೇಕಾದ ಕೌಶಲಗಳನ್ನು ಕರಗತ ಮಾಡಿಕೊಂಡಿರಬೇಕು ಎಂದು ಸಲಹೆ ನೀಡಿದರು.

ಕೊಡಗು ಜಿಲ್ಲಾ ಉದ್ಯೋಗಾಧಿಕಾರಿ ಮತ್ತು ಕೌಶಲ ಅಧಿಕಾರಿ ರೇಖಾ ಗಣಪತಿ ಮಾತನಾಡಿ, ರಾಜ್ಯ ಸರ್ಕಾರ ಕೂಡ ವೃತ್ತಿಪರ ತರಬೇತಿ ನೀಡುತ್ತಿದ್ದು, ಪದವಿ ಮುಗಿದ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ, ಆರ್.ಕೆ.ಬಾಲಚಂದ್ರ ಮಾತನಾಡಿದರು. ಕಾರ್ಯಕ್ರಮದ ಸಂಚಾಲಕ ಡಾ.ಕೆ.ಬಸವರಾಜು, ಆರ್.ರಘುರಾಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net