ಅನುದಾನಕ್ಕೆ ಸಿಎಂ ಬಿಎಸ್‌ವೈಗೆ ಮನವಿ

0303
Published on

ಚನ್ನಮ್ಮ ಕಿತ್ತೂರು: ಅನುದಾನದ ಕೊರತೆಯಿಂದಾಗಿ ಸಂಗೊಳ್ಳಿ ರಾಯಣ್ಣನ ಜನ್ಮಸ್ಥಳ ಸೇರಿದಂತೆ ವಿವಿಧ ಕಡೆ ಕೈಗೊಂಡಿರುವ ಕಾಮಗಾರಿಗಳು ಅಪೂರ್ಣಗೊಂಡಿವೆ. ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕರನ್ನು ಒತ್ತಾಯಿಸಲಾಗುವುದು ಎಂದು ಶ್ರೀ ಕ್ಷೇತ್ರ ಕಾಗಿನೆಲೆ ಮಹಾಸಂಸ್ಥಾನ ಕನಕ ಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀ ತಿಳಿಸಿದ್ದಾರೆ.

ಭಾನುವಾರ ಸಂಗೊಳ್ಳಿ ರಾಯಣ್ಣನ ಜನ್ಮ ಸ್ಥಳದಲ್ಲಿ ಕೈಗೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ರಾಕ್ ಗಾರ್ಡನ್, ದೇವಸ್ಥಾನ ಮತ್ತಿತರ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಲು ಬಿಡುವುದಿಲ್ಲ.

ಶೀಘ್ರ ಕಾಮಗಾರಿ ಆರಂಭಕ್ಕೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ಭರವಸೆ ನೀಡಿದರು. ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಶ್ರೀ, ಅಮರೇಶ್ವರ ಮಹಾರಾಜರು, ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಜಿಪಂ ಸದಸ್ಯ ಅನಿಲ ಮೇಕಲಮರಡಿ, ತಾಪಂ ಸದಸ್ಯ ಗೌಸಸಾಬ ಬುಡ್ಡೆಮುಲ್ಲಾ, ಗಂಗಪ್ಪ ಕುರಿ, ಸುನೀಲ ಕುಲಕರ್ಣಿ, ಬಸವರಾಜ ಕೊಡ್ಲಿ, ಬಸವರಾಜ ಕಮತ, ಮಹೇಶ ಹಿರೇಮಠ, ಬಸಪ್ಪ ಡೊಳ್ಳಿನ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net