

ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಂಶುಪಾಲ ಡಾ.ಎನ್.ಮಹದೇವಸ್ವಾಮಿ, ಜಗತ್ತಿನಲ್ಲಿ ಹೆಚ್ಚುತ್ತಿರುವ ಜಾಗತಿಕ ತಾಪಮಾನ, ಪರಿಸರ ಅಸಮತೋಲನದಲ್ಲಿ ಗಿಡ ಮತ್ತು ಮರಗಳು ಪ್ರಮುಖ ಪಾತ್ರವಹಿಸುತ್ತವೆ. ಪ್ರತಿಯೊಬ್ಬರೂ ತಮ್ಮ ಮನೆಗಳ ಬಳಿ ಸಸಿ ನೆಟ್ಟು ಬೆಳೆಸುವ ಮೂಲಕ ಜಾಗತಿಕ ತಾಪಮಾನ ಕಡಿಮೆ ಮಾಡಲು ನೆರವಾಗಬೇಕು ಎಂದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮರಿಸ್ವಾಮಪ್ಪ, ಸಂಚಾಲಕ ಟಿ.ಎಂ.ಮರಿಸ್ವಾಮಿ, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಇದ್ದರು.