ನಾಸೀರ್‌ಗೆ ಬಿಜೆಪಿ ಪ್ರತಿಭಟನೆ ಬಿಸಿ

xr:d:DAFrCSyoYmU:396,j:5261755198351325946,t:24041509
ಬಳ್ಳಾರಿಗೆ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಭೇಟಿ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದರು.
Published on

ಬಳ್ಳಾರಿ: ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಬಳ್ಳಾರಿ ಭೇಟಿ ವಿರೋಧಿಸಿ ಜಿಲ್ಲಾ ಬಿಜೆಪಿ ಘಟಕದಿಂದ ನಗರದ ರಾಯಲ್ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ ಮಾತನಾಡಿ, ಜಿಲ್ಲೆಯ ನಾಸೀರ್ ಅವರು ರಾಜ್ಯದಿಂದ ರಾಜ್ಯಸಭಾಕ್ಕೆ ಆಯ್ಕೆಯಾದ ದಿನ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹಿ ಕೆಲಸ ಮಾಡಿದ್ದಾರೆ. ನಾಸೀರ್ ಬಳ್ಳಾರಿಗೆ ಬರಬಾರದೆಂದು ಆಗ್ರಹಿಸಿದರು. ಇದೇ ವೇಳೆ ಬಿಜೆಪಿ ಮುಖಂಡರು ಗೋಬ್ಯಾಕ್ ನಾಸೀರ್ ಎಂದು ಘೋಷಣೆ ಕೂಗಿ ಕಪ್ಪುಪಟ್ಟಿ ಪ್ರದರ್ಶಿಸಲು ಮುಂದಾದರು.

ಸ್ಥಳಕ್ಕಾಗಮಿಸಿದ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಎಸ್.ಸಿದ್ದಪ್ಪ, ಪಾಲಿಕೆ ಸದಸ್ಯ ಹನುಮಂತಪ್ಪ, ಶ್ರೀನಿವಾಸ್ ಮೋತ್ಕರ್, ಮುಖಂಡರಾದ ಅಡವಿಸ್ವಾಮಿ, ರಘು, ಸುಗುಣಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net