

ಬೈಲಹೊಂಗಲ: ಬೇವಿನಕೊಪ್ಪ, ಸಂಗೊಳ್ಳಿ ಗ್ರಾಮದ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಗೆ ಸಂಗೊಳ್ಳಿ ರಾಯಣ್ಣ ಸೇತುವೆ ಎಂದು ಹೆಸರಿಡಲು ಹಾಗೂ ಬೇವಿನಕೊಪ್ಪ ಗ್ರಾಮದಲ್ಲಿ ರಾಯಣ್ಣ ಮೂರ್ತಿ ಸ್ಥಾಪಿಸಲು ಶ್ರಮಿಸುವುದಾಗಿ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಪಟ್ಟಣದಲ್ಲಿ ಶನಿವಾರ ಸ್ವಗೃಹದಲ್ಲಿ ಬೇವಿನಕೊಪ್ಪ ಗ್ರಾಮದ ವಿಜಯಾನಂದ ಸ್ವಾಮೀಜಿ ಅವರು ಸಲ್ಲಿಸಿದ ಮನವಿಗೆ ಸ್ಪಂದಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರು ರಾಯಣ್ಣ ಮೂರ್ತಿ ಪ್ರತಿಷ್ಠಾಪಿಸಲು ಸಹಕರಿಸಲು ಮುಂದಾಗಿದ್ದಾರೆ ಎಂದರು.