ತಂಬಾಕು ಸೇವಿಸಿದರೆ ರೋಗ ನಿರೋಧಕ ಶಕ್ತಿ ಕುಂಠಿತ

Tobacco, Indi, Hireroogi, Heart Attack, Stroke, Cancer,
ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್ ಯುಬಿಎಸ್ ಶಾಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಅನಿಲ ಪತಂಗಿ, ಎಸ್.ಎಂ.ಪಂಚಮುಖಿ, ಎಸ್.ಎಸ್. ಅರಬ ಇತರರಿದ್ದರು.
Published on

ಇಂಡಿ: ಸಮಾಜಕ್ಕೆ ಮಾರಕವಾಗಿರುವ ತಂಬಾಕು ಸೇವನೆ ಬಗೆಗಿನ ಅಪಾಯಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಿದೆ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಮುಖ್ಯಶಿಕ್ಷಕ ಅನಿಲ ಪತಂಗಿ ಹೇಳಿದರು.

ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್ ಯುಬಿಎಸ್ ಶಾಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಶುಕ್ರವಾರ ಹಮ್ಮಿಕೊಂಡಿದ್ದ ’ತಂಬಾಕು ಸೇವನೆಯ ದುಷ್ಪರಿಣಾಮಗಳು’ ಕುರಿತ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಿರಂತರ ತಂಬಾಕು ಸೇವನೆಯಿಂದ ಹೃದಯಾಘಾತ, ಪಾರ್ಶ್ವವಾಯು, ಕ್ಯಾನ್ಸರ್‌ನಂತಹ ರೋಗಗಳು ಬರುತ್ತವೆ. ನಮ್ಮ ಶರೀರದ ರೋಗ ನಿರೋಧಕ ಶಕ್ತಿ ಕುಗ್ಗಿಸಿ ಬಿಡುತ್ತದೆ. ಸಂಶೋಧನೆಗಳ ಪ್ರಕಾರ ಜಗಿದು ತಿನ್ನುವ ತಂಬಾಕು ಅತ್ಯಂತ ಅಪಾಯಕಾರಿ ಎಂದರು.

ಶಿಕ್ಷಕ ಎಸ್.ಎಂ.ಪಂಚಮುಖಿ ಮಾತನಾಡಿ, ಯುವಕರು ಗುಟಕಾ, ಸಿಗರೇಟ್ ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿ ಸುಂದರ ಬದುಕನ್ನು ಹಾಳುಮಾಡಿಕೊಳ್ಳಬಾರದು. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ನಾಗರಿಕರ ಸಹಕಾರ ಬಹುಮುಖ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್.ಎಸ್. ಅರಬ ಮಾತನಾಡಿದರು. ಪ್ರತಿಜ್ಞಾ ವಿಧಿ ಬೋಧಿಸಿ, ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಮುಖ್ಯ ಶಿಕ್ಷಕ ವಿ.ವೈ. ಪತ್ತಾರ, ಶಿಕ್ಷಕರಾದ ಎಸ್.ಬಿ. ಕುಲಕರ್ಣಿ, ಸಾವಿತ್ರಿ ಸಂಗಮದ, ಎಸ್.ಎನ್.ಡಂಗಿ, ಜೆ.ಸಿ. ಗುಣಕಿ, ಎಸ್.ಡಿ. ಬಿರಾದಾರ, ಸುರೇಶ ದೊಡ್ಯಾಳಕರ, ಶ್ರದ್ಧಾ ಬಂಕಲಗಾ, ಎನ್.ಬಿ. ಚೌಧರಿ, ಎಸ್.ಪಿ. ಪೂಜಾರಿ, ಬಿ.ಎಸ್. ಹೊಸೂರ, ಪ್ರಜ್ವಲ ಕುಲಕರ್ಣಿ, ಅಲ್ಫಿಯಾ ಅಂಗಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net