

ಹನಗೋಡು: ಹೋಬಳಿಯ ಚಿಲ್ಕುಂದ ತಂಬಾಕು ಹರಾಜು ಮಾರುಕಟ್ಟೆ ಸಂಖ್ಯೆ 62ರಲ್ಲಿ ಅ.7ರಂದು ವರ್ಜಿನಿಯಾ ತಂಬಾಕು ಹರಾಜು ಪ್ರಕ್ರಿಯೆ ಪ್ರಾರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯ ಪ್ರಾಂಗಣವನ್ನು ಕಾರ್ಮಿಕರು ಸ್ವಚ್ಛಗೊಳಿಸಿದರು.
ತಂಬಾಕು ಹರಾಜು ಮಾರುಕಟ್ಟೆ ಅಧೀಕ್ಷಕ ಸಿದ್ದರಾಮ್ ಡ್ಯಾಂಗೆ ಮಾತನಾಡಿ, ಸೋಮವಾರ ಬೆಳಗ್ಗೆ 9ಗಂಟೆ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ.ಡಿ.ಹರೀಶ್ ಗೌಡ, ಡಿ.ರವಿಶಂಕರ್ ಹಾಗೂ ಮಂಡಳಿಯ ಪ್ರಾದೇಶಿಕ ವ್ಯವಸ್ಥಾಪಕ ಲಕ್ಷ್ಮಣರಾವ್ ಚಾಲನೆ ನೀಡಲಿದ್ದಾರೆ. ಮೊದಲ ದಿನದ ಹರಾಜಿನಲ್ಲಿ ಐಟಿಸಿ, ಡಿಪಿಐ, ಡೆಕನ್, ಪಿಎಸ್‌ಎಚ್ ಸೇರಿದಂತೆ 12ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ತಂಬಾಕು ರೈತರು ಮಂಡಳಿ ವಿತರಿಸಿರುವ ಪಟ್ಟದಲ್ಲೇ ಹೊಗೆಸೊಪ್ಪನ್ನು ಬೆಲ್ ಮಾಡಿ ತರುವುದರೊಂದಿಗೆ ರೈತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.