ತಂಬಾಕು ಸೇವನೆಯಿಂದ ದೂರವಿರಿ

23 KMAMPLI 04
ಎಮ್ಮಿಗನೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಬಿ.ಸಿ.ಟ್ರಸ್ಟ್ ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಉದ್ಘಾಟಿಸಿದರು. ಪ್ರಮುಖರಾದ ಗೀತಾ, ವಿ.ವೀರೇಶ್, ಎಸ್.ರಾಮು, ಹನುಮವ್ವ, ಸಂಜುಕುಮಾರ್ ಇತರರಿದ್ದರು.
Published on

ಕಂಪ್ಲಿ: ಬಾಕು ಸೇವನೆಯಿಂದ ದೂರ ಇರುವುದು ಉತ್ತಮ ಆರೋಗ್ಯದ ಗುಟ್ಟಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಹೇಳಿದರು.

ತಾಲೂಕಿನ ಎಮ್ಮಿಗನೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಟ್ರಸ್ಟ್‌ನಿಂದ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದು ಅರ್ಹರು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಎಸ್.ರಾಮು ಮಾತನಾಡಿ, ತಂಬಾಕು ಸೇವನೆಯಿಂದ ದೂರವಿದ್ದಲ್ಲಿ ಶ್ವಾಸಕೋಶ ಸಂಬಂಧಿತ ರೋಗಗಳಿಂದ ದೂರವಿರಲು ಸಾಧ್ಯ ಎಂದರು. ಪ್ರಾಚಾರ್ಯೆ ರಾಧಾ ಶಾಲಾ ಮಕ್ಕಳಿಗೆ ತಂಬಾಕು ಸೇವನೆ ನಿಷೇಧ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಂರಕ್ಷಣಾಧಿಕಾರಿ ಗೀತಾ, ತಾಲೂಕು ಹಸಿರು ಸೇನೆ ರೈತ ಸಂಘದ ಅಧ್ಯಕ್ಷ ವಿ.ವೀರೇಶ್, ಒಕ್ಕೂಟದ ಅಧ್ಯಕ್ಷೆ ಹನುಮವ್ವ, ಟ್ರಸ್ಟ್ ತಾಲೂಕು ಕೃಷಿ ಅಧಿಕಾರಿ ಸಂಜುಕುಮಾರ್, ವಲಯ ಮೇಲ್ವಿಚಾರಕ ಮಂಜುನಾಥ, ಸೇವಾಪ್ರತಿನಿಧಿಗಳಾದ ಲಕ್ಷ್ಮೀ, ಶಾಹಿದಾ, ಸಿ.ಎಸ್.ಸಿ.ಸೇವಾದಾರ ಶಶಿಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net