ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ

Tobacco 30 may 20
Published on

ಯಾದಗಿರಿ :  ಕೋಟ್ಪಾ ಕಾಯ್ದೆ 2003ರನ್ವಯ ಶಾಲಾ ಆರವಣದ 100 ಮೀ.ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವುದು ಅಪರಾದವಾಗಿರುತ್ತದೆ ಎಂದು ಯಾದಗಿರಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಮಲ್ಲಣ್ಣಗೌಡ ಎಸ್.ಪಾಟೀಲ್  ಅವರು ತಿಳಿಸಿದ್ದಾರೆ.

2024ರ ನವೆಂಬರ್ 7ರ ಶನಿವಾರ ರಂದು ಶಹಾಪೂರ ತಾಲೂಕಿನಲ್ಲಿ ಸಾರ್ವಜನಿಕ ಪಾಠಶಾಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮದಡಿ ಜಾಗೃತ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಲಾ ಮಕ್ಕಳಿಂದ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ಮಕ್ಕಳಿಂದ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಅರಿವು ಮೂಡಿಸಲಾಯಿತು. ಶಾಲಾ ಸಿಬ್ಬಂದಿ ವರ್ಗದವರಿಗೆ ಮತ್ತು ಮಕ್ಕಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಜಾಗೃತಿ ಮೂಡಿಸಲಾಯಿತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net