

ಕಾಸರಗೋಡು: ಲಾರಿಯಲ್ಲಿ ಸಾಗಿಸುತ್ತಿದ್ದ, ಭಾರಿ ಪ್ರಮಾಣದ ತಂಬಾಕು ಉತ್ಪನ್ನ ಕುಂಬಳೆ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರಿನಿಂದ ತಿರುವನಂತಪುರಕ್ಕೆ ಈರುಳ್ಳಿಚೀಲದ ಮಧ್ಯೆ ಕೇರಳದಲ್ಲಿ ನಿಷೇಧಿತ ತಂಬಾಕು ಉತ್ಪನ್ನ ಸಾಗಿಸುವ ಮಧ್ಯೆ ಕಾರ್ಯಾಚರಣೆ ನಡೆಸಲಾಗಿದೆ.
ಲಾರಿ ಚಾಲಕ ತಿರುವನಂತಪುರ ಮಂಜಂಗೋಡ್ ನಿವಾಸಿ ಮಹಮ್ಮದ್ ಅನ್ವರ್ ಎಂಬಾತನನ್ನು ಬಂಧಿಸಲಾಗಿದೆ. ಮಂಗಳೂರಿನಿಂದ ಸರಕು ಸಾಗಾಟದ ಲಾರಿಯಲ್ಲಿ ಭಾರಿ ಪ್ರಮಾಣದ ತಂಬಾಕು ಉತ್ಪನ್ನ ಕೇರಳಕ್ಕೆ ರವಾನೆಯಾಗುತ್ತಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಬಿಜೋಯ್ ಅವರಿಗೆ ಲಭಿಸಿದ ಮಾಹಿತಿಯನ್ವಯ ಕುಂಬಳೆ ಠಾಣೆ ಇನ್ಸ್‌ಪೆಕ್ಟರ್ ಹಾಗೂ ಎಸ್.ಐ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.