

ಕಾಸರಗೋಡು: ಗೂಡ್ಸ್ ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಚಂದೇರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನೆಲ್ಲಿಕುಂಜೆ ಪಾದೂರ್ ಹೌಸ್ ನಿವಾಸಿ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಿದ್ದಾರೆ. ಕಾಲಿಕ್ಕಡವು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸ್‌ಐ ಸತೀಶನ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ. ಎರಡು ಪ್ಲಾಸ್ಟಿಕ್ ಗೋಣಿಚೀಲದಲ್ಲಿ ತುಂಬಿಡಲಾಗಿದ್ದ ತಂಬಾಕು ಉತ್ಪನ್ನ ಹಾಗೂ ಸಾಗಾಟಕ್ಕೆ ಬಳಸಿದ್ದ ಗೂಡ್ಸ್ ಆಟೋರಿಕ್ಷಾ ವಶಪಡಿಸಿಕೊಳ್ಳಲಾಗಿದೆ.