

ದಾವಣಗೆರೆ: ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ 12 ಪ್ರಕರಣ ದಾಖಲಿಸಿ, 2250 ರೂ. ದಂಡ ವಿಧಿಸಲಾಯಿತು.
ತಾಲೂಕಿನ ಕುಂದೂರು-ಕೂಲಂಬಿ ಮುಖ್ಯರಸ್ತೆಯಲ್ಲಿ ಹೋಟೆಲ್, ಅಂಗಡಿ-ಮುಂಗಟ್ಟು, ಬಾರ್, ರೆಸ್ಟೋರೆಂಟ್, ಪಾನ್ ಶಾಪ್ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕಲಾಯಿತು.
ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರು ಧೂಮಪಾನ ನಿಷೇಧದ ನಾಮಫಲಕವನ್ನು ಪ್ರದರ್ಶಿಸಲು ಹಾಗೂ ಅಳವಡಿಸಲು ತಂಡ ತಾಕೀತು ಮಾಡಿತು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಲಹೆಗಾರ ಸತೀಶ ಕಲಹಾಳ್, ಸಾಮಾಜಿಕ ಕಾರ್ಯಕರ್ತ ಕೆ.ಪಿ.ದೇವರಾಜ್, ಕುಂದೂರು-ಕೂಲಂಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜರಾಂ, ಶ್ರೀನಿವಾಸ್, ಶಿಕ್ಷಣ ಇಲಾಖೆ ಸಿಆರ್‌ಪಿ ಎಸ್.ಕೆ.ಸತೀಶಕುಮಾರ, ಪೊಲೀಸ್ ಸಿಬ್ಬಂದಿ ರಾಘವೇಂದ್ರ, ಕೆ.ರಾಜು ಇದ್ದರು.