ಇಂದು ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಮಹೋತ್ಸವ

Published on

ಮದ್ದೂರು: ತಾಲೂಕಿನ ಕೊಪ್ಪ ಹೋಬಳಿ ಚಿಕ್ಕೋನಹಳ್ಳಿಯ ಶ್ರೀ ಮಹಾದೇವಿ ಅಮ್ಮನವರ ನೂತನ ವಿಗ್ರಹ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಮಹೋತ್ಸವ ನ.2ರಂದು ನೆರವೇರಲಿದೆ.

ಕುಂಭಾಭಿಷೇಕ ಮಹೋತ್ಸವದ ಪೂರ್ವಭಾವಿಯಾಗಿ ಬುಧವಾರ ಅಗ್ರತೀರ್ಥ ಸಂಗ್ರಹ ಸಮೇತ ಯಾಗಶಾಲಾ ಪ್ರವೇಶ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಸಂಜೆ 8 ಗಂಟೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಂತರ ಹೋಮ ಮತ್ತು ನವಗ್ರಹ ಸ್ಥಾಪನೆ ಮಾಡಿದ ಬಳಿಕ ದೇವರಿಗೆ ಮಹಾಮಂಗಳಾರತಿ ಮಾಡಿ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಗುರುವಾರ ಬೆಳಗ್ಗೆ 9.30 ಗಂಟೆಗೆ ಮಹಾ ಪೂರ್ಣಾಹುತಿ ಕುಂಭಾಭಿಷೇಕದೊಂದಿಗೆ ಶ್ರೀ ಮಹಾದೇವಿ ಅಮ್ಮನವರ ನೂತನ ವಿಗ್ರಹ ಪ್ರತಿಷ್ಠಾಪನೆ ಕಾರ್ಯ ಜರುಗಲಿದೆ.

ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕ ಕೆ.ಸುರೇಶ್‌ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ವಕೀಲರಾದ ಚಿಕ್ಕಬೋರೇಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಚಿಕ್ಕೋನಹಳ್ಳಿ ಸಿದ್ದರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net