ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Today is International Democracy Day
Published on

ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೆ.15 ರಂದು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ಜರುಗುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಲಿದ್ದಾರೆ. ಶಾಸಕ ಎಚ್.ವೈ.ಮೇಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನವದೆಹಲಿಯ ವಿಶೇಷ ಪ್ರತಿನಿಧಿ-2 ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಸಂಸದ ಪಿ.ಸಿ.ಗದ್ದಿಗೌಡರ ಸೇರಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net