ಇಂದು ಮಹರ್ಷಿ ವಾಲ್ಮೀಕಿ ಜಯಂತಿ

IMG-20251005-WA0145
ಆಲೂರು ತಾಲೂಕು ಕಚೇರಿ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ತಹಸೀಲ್ದಾರ್ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಸಭೆ ನಡೆಯಿತು. ಮಂಜುನಾಥ್, ಕೌಸರ್ ಅಲಿ ಇದ್ದರು.
Published on

ಆಲೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಅ.7 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕು ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಎಲ್ಲ ಇಲಾಖೆ ಅಧಿಕಾರಿಗಳು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಎಂದು ತಹಸೀಲ್ದಾರ್ ಎಚ್.ಮಲ್ಲಿಕಾರ್ಜುನ್ ಮನವಿ ಮಾಡಿದರು.

ಪಟ್ಟಣದ ತಾಲೂಕು ಆಡಳಿತ ಸಭಾಂಗಣದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದವರು.

ವಾಲ್ಮೀಕಿ ಮಹರ್ಷಿಯವರ ಜೀವನ ಸಂದೇಶಗಳು ಇಂದು ಸಮಾಜಕ್ಕೆ ಮಾರ್ಗದರ್ಶಕವಾಗಿವೆ. ಸಾಂಸ್ಕೃತಿಕ, ಧಾರ್ಮಿಕ ಹಾಗೂ ಶಿಸ್ತುಬದ್ಧ ರೀತಿಯಲ್ಲಿ ಆಚರಿಸಲಾಗುವುದು. ಸಮಾಜದ ಬಾಂಧವರು ಸೇರಿದಂತೆ ಜಿಲ್ಲೆಯ ನಾನಾ ಸಂಘ ಸಂಸ್ಥೆಗಳು, ಸಮುದಾಯದ ಮುಖಂಡರು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ಮನವಿ ಮಾಡಿದರು.

ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಸನ್ಮಾನಿಸಲು ತೀರ್ಮಾನಿಸಲಾಯಿತು. ತಾಲೂಕು ಮಟ್ಟದ ಇಲಾಖೆ ಅಧಿಕಾರಿಗಳು ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ತಾಲೂಕಿನ ಎಲ್ಲ ಕನ್ನಡಪರ ಸಂಘಟನೆ, ದಲಿತಪರ ಸಂಘಟನೆ, ಸೇರಿದಂತೆ ಎಲ್ಲ ಸಂಘಟನೆಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಂಜುನಾಥ್, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಕೌಸರ್ ಅಲಿ, ತೋಟಗಾರಿಕೆ ಸಹಾಯಕ ನಿರ್ದೇಶಕ ರಮೇಶ್ ಕುಮಾರ್, ನರೇಗಾ ಸಹಾಯಕ ನಿರ್ದೇಶಕ ಕೇಶವಮೂರ್ತಿ ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು, ದ.ಸಂ.ಸ ಮುಖಂಡರು,ಹಿಂದುಳಿದ ವರ್ಗಗಳ ಮುಖಂಡರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net