

ಮಡಿಕೇರಿ: ರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಜನ್ಮದಿನವನ್ನು ಜು.೯ ರಂದು ಭಾಗಮಂಡಲದ ಕೋರಂಗಾಲದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಸುನೀಲ್ ಪತ್ರಾವೋ ಹಾಗೂ ಹಾರಿಸ್ ಪದಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ ೮ ಗಂಟೆಗೆ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಪೊನ್ನಣ್ಣ ಅವರು, ಸಸಿ ನೆಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣಗೊಳಿಸಲಿರುವರು. ನಂತರ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಲಿದ್ದಾರೆ. ೧೦ ಗಂಟೆಗೆ ಕೋರಂಗಾಲದ ಅಟಲ್ ಬಿಹಾರಿ ವಾಜಪೇಯಿ ವಸತಿಯ ಶಾಲೆಯ ಮಕ್ಕಳೊಂದಿಗೆ ಜನ್ಮದಿನದ ಆಚರಣೆ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.